×
Ad

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆ ಎದುರಿಸುತ್ತೇವೆ: ಬೊಮ್ಮಾಯಿ

Update: 2023-09-11 23:50 IST

ಹುಬ್ಬಳ್ಳಿ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆ ಎದುರಿಸುತ್ತೇವೆ. ಪಕ್ಷದಲ್ಲಿ ಅಸಮಾಧಾನವನ್ನು ಹೊರ ಹಾಕಿದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು, ಕೆಲವರು ಲಿಂಗಾಯತರಿಗೆ ಅನ್ಯಾಯ ಆಗುತ್ತಿದೆ ಎಂದು ಹೇಳಿದ್ದಾರೆ. ಅವು ಬಗೆಹರೆಯಲಾಗದ ಸಮಸ್ಯೆಗಳೇನಲ್ಲ, ವಿಶ್ವಾಸಕ್ಕೆ ತೆಗೆದುಕೊಂಡು ಹೋದ್ರೆ ಎಲ್ಲವೂ ‌ಸರಿ ಹೋಗುತ್ತದೆ ಎಂದರು.

ಪ್ರದೀಪ್ ಶೆಟ್ಟರ್ ಮತ್ತು ಶಂಕರ ಪಾಟೀಲ ಮುನೇನಕೊಪ್ಪರಿಂದ ಹಿಡಿದು ಎಲ್ಲರ ಜೊತೆಗೆ ಮಾತನಾಡಲಾಗಿದೆ.‌ ಲೋಕಸಭಾ ಚುನಾವಣೆ ಸಮೀಪಸುತ್ತಿದೆ. ಹೀಗಾಗಿ ಬೂತ್ ಮಟ್ಟದದಿಂದ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿಂದ ಜನ ವಿರೋಧಿ‌ ಆಡಳಿತ ಮಾಡಿದೆ. ಜನರಿಗೆ ಸುಳ್ಳು ಹೇಳಿದೆ, ಮೋಸ ಮಾಡಿದೆ, ವರ್ಗಾವಣೆ ಧಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ಮಾಡಿದೆ. ಈ‌ ನಿಟ್ಟಿನಲ್ಲಿ ಜಿಲ್ಲಾವಾರು ಪ್ರವಾಸ ಮಾಡಿ ಹೋರಾಟದ ರೂಪರೇಷೆ ಸಿದ್ದಪಡಿಸಬೇಕಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News