×
Ad

ಚಾಮರಾಜನಗರ: ಪಶ್ಚಿಮ ಬಂಗಾಳ ಮೂಲದ ಬಸ್ ಪಲ್ಟಿ; 25 ಮಂದಿಗೆ ಗಾಯ

Update: 2023-10-25 09:21 IST

ಚಾಮರಾಜನಗರ: ತಮಿಳುನಾಡಿನಿಂದ ಕರ್ನಾಟಕದತ್ತ ಬರುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಳದ ಬಸ್ ವೊಂದು ತಮಿಳುನಾಡಿನ ತೀರ್ಥಕ್ಷೇತ್ರಗಳನ್ನು ನೋಡಿಕೊಂಡು ಚಾಮರಾಜನಗರ ಜಿಲ್ಲೆಯ ಬಂಡೀಪುರ ಮಾರ್ಗವಾಗಿ ಕರ್ನಾಟಕಕ್ಕೆ ಬರುತ್ತಿದ್ದಾಗ ಇಳಿಜಾರಿನ ರಸ್ತೆಯಲ್ಲಿ ಬ್ರೇಕ್ ಫೇಲ್ ಆಗಿ ಅವಘಡ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಡುಗೆ ಸಿಬ್ಬಂದಿ ಸೇರಿದಂತೆ 65 ಮಂದಿ ಈ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. 25 ಮಂದಿ ಗಾಯಗೊಂಡಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಬಹುಪಾಲು ಮಂದಿ ಹಾಗೂ ಗಾಯಗೊಂಡ ಅನೇಕರು ಹಿರಿಯ ನಾಗರಿಕರಾಗಿದ್ದಾರೆ. ಗಾಯಾಳುಗಳನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News