×
Ad

5 ವರ್ಷಗಳ ಕಾಲ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಡಿ.ಕೆ ಶಿವಕುಮಾರ್‌ ಹೇಳಿದ್ದೇನು?

Update: 2023-11-02 22:28 IST

ಸಂಗ್ರಹ ಚಿತ್ರ

ಬೆಂಗಳೂರು: ʻಐದು ವರ್ಷಗಳ ಕಾಲ ನಾನೇ ಸಿಎಂʻ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. 

ರಾಜ್ಯ ಒಕ್ಕಲಿಗರ ಸಂಘದ ಕೇಂದ್ರ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ನಾನು ಈ ವಿಚಾರವಾಗಿ (ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ) ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷ ಹೇಳಿದ್ದನ್ನು ಪಾಲಿಸುವುದಷ್ಟೇ ನಮಗೆ ಗೊತ್ತು" ಎಂದು ತಿಳಿಸಿದರು. 

ʻʻ ಕಿತ್ತಾಟ ಇರೋದು ಬಿಜೆಪಿಯಲ್ಲಿʻʻ

ಕಾಂಗ್ರೆಸ್ ನಾಯಕರು ಕಚ್ಚಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, "ನಮ್ಮಲ್ಲಿ ಯಾವುದೇ ಜಗಳ ಇಲ್ಲ. ಬಿಜೆಪಿ ಮುಖಂಡರು ತಮ್ಮ ವೈಫಲ್ಯ ಮುಚ್ಚಿಡಲು ಈ ರೀತಿ ಮಾತನಾಡುತ್ತಾರೆ. ನಮ್ಮ ಶಾಸಕರುಗಳಿಗೆ ಚಾಕೊಲೇಟ್ ನೀಡಲು ಪ್ರಯತ್ನಿಸುತ್ತಿದ್ದಾರೆ" ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

"ಕಾಂಗ್ರೆಸ್ ಪಕ್ಷದಲ್ಲಿ ಕಿತ್ತಾಟ ಇಲ್ಲ. ಕಿತ್ತಾಟ ಇರೋದು ಬಿಜೆಪಿಯಲ್ಲಿ. ಹೀಗಾಗಿ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲು ಆಗಿಲ್ಲ" ಎಂದು ಅವರು ತಿರುಗೇಟು ನೀಡಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News