×
Ad

ಡಿ.ಕೆ.ಶಿವಕುಮಾರ್ ಭೇಟಿ ಬಗ್ಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದೇನು?

Update: 2023-11-17 19:41 IST

ಬೆಂಗಳೂರು, ನ. 17: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಾವುದೇ ರಾಜಕೀಯ ಉದ್ದೇಶದಿಂದ ನಾನು ಭೇಟಿ ಮಾಡಿರಲಿಲ್ಲ. ತಮ್ಮ ಭೇಟಿಗೆ ರಾಜಕೀಯ ಬಣ್ಣ ಬಳಿಯುವ ಅಗತ್ಯವಿಲ್ಲ’ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲಿಲ್ಲ. ಇದೊಂದು ಸಾಮಾನ್ಯ ಭೇಟಿ ಅಷ್ಟೇ. ವಯಸ್ಸಾದ ಸಂದರ್ಭದಲ್ಲಿ ನೀವು ತಪ್ಪು ಮಾಡಿದ್ದೀರಿ ಎಂದು ಅನಿಸುತ್ತದೆಂದು ಶಿವಕುಮಾರ್ ನನಗೆ ಹೇಳಿದರು. ಆದರೆ ನಾನು ಜೆಡಿಎಸ್ನಲ್ಲೇ ಚೆನ್ನಾಗಿದ್ದೇನೆ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ವಿವರಣೆ ನೀಡಿದರು.

ಜೆಡಿಎಸ್-ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಅದೇ ರೀತಿ ಮುಂದುವರೆಯಲಿದೆ ಎಂದ ಅವರು, ಪದೇ ಪದೇ ಕುಮಾರಸ್ವಾಮಿಯವರ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಅದೇ ರೀತಿಯಲ್ಲಿ ಯಾರೂ ಮಾತನಾಡಬಾರದು ಎಂದು ಜಿ.ಟಿ.ದೇವೇಗೌಡ ಇದೇ ವೇಳೆ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News