×
Ad

ಗುಹ್ಯ ಗ್ರಾಮದಲ್ಲಿ ಹಾಡಹಗಲೇ ಕಾಡಾನೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

Update: 2023-07-11 17:22 IST

ಸಾಂದರ್ಭಿಕ ಚಿತ್ರ

ಮಡಿಕೇರಿ ಜು.11 : ಸಿದ್ದಾಪುರ ಗುಹ್ಯ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಇರುವ ಏಂಜಲ್ ಫೀಡ್ ಜ್ಯೋತಿ ;ಪೊನ್ನಪ್ಪ ಅವರ ತೋಟದಲ್ಲಿ ಹಾಡಹಗಲೇ ಧಿಡೀರನೆ ಕಾಡಾನೆ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ.

ಇತ್ತೀಚೆಗೆ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೂಲಿ ಕಾರ್ಮಿಕರು, ಶಾಲಾ ಮಕ್ಕಳು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆ ತಕ್ಷಣವೆ ಆನೆಗಳನ್ನು ಕಾಡಿಗಟ್ಟುವ ಕೆಲಸ ಆಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News