×
Ad

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಒಪ್ಪಿಗೆ ಕೊಡಿಸುತ್ತೇನೆ : ಎಚ್.ಡಿ.ದೇವೇಗೌಡ

Update: 2024-11-07 20:29 IST

PC : x/@H_D_Devegowda

ಚನ್ನಪಟ್ಟಣ : ನಾನು ನನ್ನ ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಣೆ ಮಾಡಿದರು.

ಗುರುವಾರ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ ತಮಿಳುನಾಡಿನವರು ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಇಗ್ಗಲೂರು ಆಣೆಕಟ್ಟು ಕಟ್ಟಿದ್ದು ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು ದೈವದ ಆಟ. ನಾನು ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಅಳಿಸಿದ್ದಾರೆ ಎಂದು ದೇವೇಗೌಡ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News