×
Ad

ಆತ್ಮಗೌರವಕ್ಕೆ ಧಕ್ಕೆಯಾದರೆ ರಾಜೀನಾಮೆ: ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್

Update: 2023-07-30 23:59 IST

ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್

ಬೆಂಗಳೂರು: ನನ್ನ ಆತ್ಮಗೌರಕ್ಕೆ ಧಕ್ಕೆ ಆದರೆ ರಾಜೀನಾಮೆ ಕೊಡುತ್ತೇನೆ. ಅಲ್ಲದೆ, ನಾನು ಯಾರಿಗೂ ಕ್ಷಮೆ ಕೇಳಿಲ್ಲ, ಕ್ಷಮೆ ಕೇಳುವ ಹೇಡಿತನ ನನ್ನದಲ್ಲ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನನ್ನ ಆತ್ಮಗೌರವಕ್ಕೆ ಧಕ್ಕೆ ಬಂದರೆ ರಾಜೀನಾಮೆ ನೀಡುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಆದರೆ, ಯಾವ ಕಾರಣಕ್ಕೆ ಎನ್ನುವುದು ಸೇರಿದಂತೆ ಎಲ್ಲ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಆಗಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ನಾನು ಕ್ಷಮೆ ಕೇಳಿಲ್ಲ, ಕ್ಷಮೆ ಕೇಳುವಂತಹ ತಪ್ಪು ಕೂಡಾ ನಾನು ಮಾಡಿಲ್ಲ, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕೇಳುವದು ನಮ್ಮ ಹಕ್ಕು. ಶಾಸಕಾಂಗ ಪಕ್ಷದ ಸಬೆಯಲ್ಲಿ ನಮ್ಮ ಎಲ್ಲ ವಿಚಾರ ಹೇಳಿದ್ದೇವೆ. ಅದಕ್ಕೆ ಪರಿಹಾರ ಕೂಡಾ ಸಿಕ್ಕಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News