ಡಿ.4ರಿಂದ ಬೆಳಗಾವಿಯಲ್ಲಿ 10 ದಿನಗಳ ಕಾಲ ಚಳಿಗಾಲದ ಅಧಿವೇಶನ
Update: 2023-11-15 21:10 IST
ಸಂಗ್ರಹ ಚಿತ್ರ - ಸುವರ್ಣ ವಿಧಾನಸೌಧ
ಬೆಂಗಳೂರು, ನ. 15: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ 15ರ ವರೆಗೆ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಡಿ.4ರ ಬೆಳಗ್ಗೆ 11ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಶನಿವಾರ ಮತ್ತು ರವಿವಾರ ಹೊರತುಪಡಿಸಿ ಒಟ್ಟು 10 ದಿನಗಳ ಕಾಲ ಅಧಿವೇಶನ ಕಲಾಪ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರುಗಲಿದೆ ಎಂದು ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.