×
Ad

ಮಡಿಕೇರಿಯಲ್ಲಿ ಮಹಿಳೆಯ ಬಂಧನ: 2.26 ಕೆಜಿ ಗಾಂಜಾ ವಶ

Update: 2023-09-15 17:31 IST
ಸಾಂದರ್ಭಿಕ ಚಿತ್ರ

ಮಡಿಕೇರಿ ಸೆ.15 : ನಾಪೋಕ್ಲು ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಅಸ್ಸಾಂ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ನಾಪೋಕ್ಲುವಿನಲ್ಲಿ ವಾಸವಿರುವ ಅಸ್ಸಾಂ ಮೂಲದ ದಿಲ್ಷಾನ್ ಬೇಗಂ(44) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಆಕೆಯ ಬಳಿಯಿದ್ದ 2 ಕೆ.ಜಿ. 260 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ ಮಾರ್ಗದರ್ಶನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News