×
Ad

ನೆಲಮಂಗಲ: ಚಿರತೆ ದಾಳಿಗೆ ಮಹಿಳೆ ಬಲಿ

Update: 2024-11-18 18:40 IST

ಬೆಂಗಳೂರು: ಚಿರತೆ ದಾಳಿಗೆ ರೈತ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ತಪ್ಪಲಿನ ಕಂಬಾಳು ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಗೊಲ್ಲರಹಟ್ಟಿಯ ಕರಿಯಮ್ಮ (55) ಮೃತ ಮಹಿಳೆಯಾಗಿದ್ದಾರೆ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿದ್ದ ವೇಳೆ ಚಿರತೆ ಮಹಿಳೆಯ ಮೇಲೆ ದಾಳಿ ಮಾಡಿದ್ದು, ಈ ವೇಳೆ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News