×
Ad

ರಾಮಮಂದಿರ ಉದ್ಘಾಟನೆಗೆ ಹೋಗುವುದಿಲ್ಲ: ಬಿ.ಎಸ್.ಯಡಿಯೂರಪ್ಪ

Update: 2024-01-19 17:34 IST

ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಇದೇ ತಿಂಗಳ 22ರಂದು ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವುದಿಲ್ಲ. ಆದರೆ, ತಿಂಗಳದೊಳಗೆ ಅಯೋಧ್ಯೆಗೆ ತೆರಳುತ್ತೇನೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕಡೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಬಗ್ಗೆ ಚರ್ಚೆಯಾಗುತ್ತಿದೆ. ಬಹಳ ಅದ್ದೂರಿಯಾಗಿ ಯಾವುದೇ ಅಡೆ ತಡೆ ಇಲ್ಲದೆ ಕಾರ್ಯಕ್ರಮ ನಡೆಯುತ್ತದೆ ಎನ್ನುವ ವಿಶ್ವಾಸವಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News