×
Ad

ವಿಶ್ವಕಪ್ ಫೈನಲ್‌ | ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ: ಸಿಎಂ ಸಿದ್ದರಾಮಯ್ಯ ಕರೆ

Update: 2023-11-19 23:04 IST

PHOTO - Twitter@CMofKarnataka

ಬೆಂಗಳೂರು: ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತದ ಎದುರು 6 ವಿಕೆಟ್ ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. 

ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ''ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

''ಸೋಲು - ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ'' ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

''ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋತರೂ, ಟೀಮ್ ಇಂಡಿಯಾ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ಇಡೀ ಸರಣಿಯಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ #TeamIndia ಬಗ್ಗೆ ಹೆಮ್ಮೆ ಇದೆ. ಆ ಎಲ್ಲ ನೆನಪುಗಳಿಗಾಗಿ ಧನ್ಯವಾದಗಳು'' ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News