×
Ad

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

Update: 2023-12-06 16:11 IST

Photo: facebook

ಬೆಂಗಳೂರು: ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಒಪ್ಪಿಗೆ ಹಿಂಪಡೆದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸರ್ಕಾರದ ಕ್ರಮ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿರುವ ಅವರು, ಒಪ್ಪಿಗೆ ಹಿಂಪಡೆದ ಸರ್ಕಾರದ ಆದೇಶ ರದ್ದುಪಡಿಸಿ ತನಿಖೆ ಮುಂದುವರಿಸುವಂತೆ ಸಿಬಿಐ ಗೆ ನಿರ್ದೇಶಿಸಲು ಮನವಿ ಮಾಡಿದ್ದಾರೆ.

ಕಾಜಿ ಲೆಂಡಪ್ ದೋರ್ಜಿ ಪ್ರಕರಣದ ತೀರ್ಪಿನ ಉಲ್ಲೇಖ ಮಾಡಿರುವ ಶಾಸಕ ಯತ್ನಾಳ್, ಒಮ್ಮೆ ಸಿಬಿಐ ತನಿಖೆಗೆ ನೀಡಿದ ಒಪ್ಪಿಗೆ ಹಿಂಪಡೆಯುವಂತಿಲ್ಲ.ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರ. ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ ಪಿಐಎಲ್ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News