×
Ad

ಯತ್ನಾಳ್‌ ಅವರೇ, ಜನರ ನಡುವೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿ: ಕಾಂಗ್ರೆಸ್

Update: 2023-12-09 20:05 IST

ಬೆಂಗಳೂರು: ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಹೊರಗೆ ಮಾತ್ರ ಮುಸ್ಲಿಮರ ಮೇಲೆ ದ್ವೇಷ ಭಾಷಣ ಮಾಡುತ್ತಾರೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಬಗ್ಗೆ ಎಕ್ಸ್‌ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರಸ್, ರಾಜಕೀಯ ಪಕ್ಷ ಬದಲಾದಂತೆ ಹಿಂದೂ ಹಲಿಯ ವೇಷವೂ ಬದಲಾಗುತ್ತದೆ!. ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರ ಮುಸ್ಲಿಮರೊಂದಿಗೆ ಬದುಕು, ಆದರೆ ಹೊರಗೆ ಮಾತ್ರ ಮುಸ್ಲಿಮರ ಮೇಲೆ ದ್ವೇಷ ಭಾಷಣ ಎಂದು ಟೀಕಿಸಿದೆ.

"ಬಸನಗೌಡ ಪಟೀಲ್‌ ಯತ್ನಾಳ್‌ ಅವರೇ, ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣುತ್ತಿದ್ದೀರಿ. ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿ. ಎಂದು ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News