×
Ad

ಗ್ಯಾರಂಟಿ ಯೋಜನೆಗಳ ಬಗ್ಗೆ ಯಡಿಯೂರಪ್ಪ ಚೆನ್ನಾಗಿ ಪ್ರಚಾರ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್

Update: 2023-07-04 15:15 IST

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಯಡಿಯೂರಪ್ಪ ಚೆನ್ನಾಗಿ ಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಫ್ರೀಡಂ ಪಾರ್ಕಿನಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧದ ಪ್ರತಿಭಟನೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಕಲಾಪಕ್ಕಿಂತಲೂ ಮುನ್ನ ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಕೆಲವರಿಗೆ ರೆಸ್ಟ್ ಕೊಟ್ಟಿದ್ದಾರೆ. ಅಂತಹವರು ರೆಸ್ಟ್ ತೆಗೆದುಕೊಳ್ಳಲಿ. ಸುಮ್ಮನೆ ಗಾಬರಿಯಾಗ್ತಿದ್ದಾರೆ. ನಾವು ಏನು ಅನಾಹುತ ಮಾಡಿದ್ದೇವೆ ಅಂತ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ತಿಳಿಸಲಿ. ನಾವು ತಿದ್ದಲು ಸದಾ ಸಿದ್ದರಿದ್ದೇವೆ ಎಂದರು.

ಕಾಂಗ್ರೆಸ್ ವಿರುದ್ಧ ಲಂಚದ ಆರೋಪ ಮಾಡಿರುವ HDKಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ ಅವರು, ಯಾವ ಲಂಚನೂ ಇಲ್ಲ ಏನೂ ಇಲ್ಲ. ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಎಲೆಕ್ಷನ್ ನಲ್ಲಿ ವೋಟ್ ಕಡಿಮೆ ಬಂದಿದೆ ಅಂತ ಮನಸ್ಸಿಗೆ ಬೇಜಾಗಿದೆ. ಆದ್ದರಿಂದ ಏನೆಲ್ಲಾ ಮಾತಾಡುತ್ತಾರೆ. ಇದು ಸತ್ಯಕ್ಕೆ ದೂರ. ಅದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳಬಾರದು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News