×
Ad

ಮುಂದುವರೆಯಲಿರುವ ನೈಋತ್ಯ ಮಾನ್ಸೂನ್ ಪ್ರಭಾವ | ರಾಜ್ಯದ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್ ಘೋಷಣೆ’

Update: 2024-06-29 20:49 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ತನ್ನ ಪ್ರಭಾವವನ್ನು ಮುಂದುವರೆಸಿದ್ದು, ಈ ಹಿನ್ನಲೆಯಲ್ಲಿ 3 ದಿನಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜು.2ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೂರು ದಿನ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಅಲ್ಲೆಲ್ಲ ಸಾಧಾರಣ ಮಳೆ ಬೀಳಲಿದೆ. ಇನ್ನು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News