×
Ad

ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ: ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್

Update: 2023-07-30 23:35 IST

ಸಾಂದರ್ಭಿಕ ಚಿತ್ರ 

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸುರಿಯುವ ಲಕ್ಷಣಗಳು ಕಾಣಿಸುತ್ತಿದ್ದು, ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ ನೀಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜು.31ರಿಂದ ಆ.3ರ ವರೆಗೆ 6ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆ.3ಕ್ಕೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಮುಂದಿನೊಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News