×
Ad

ಯೋಗೀಶ್‌ ಗೌಡ ಹತ್ಯೆ ಪ್ರಕರಣ | ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂಕೋರ್ಟ್‌ನಿಂದ ಜಾಮೀನು

Update: 2026-02-27 12:22 IST

ವಿನಯ್‌ ಕುಲಕರ್ಣಿ

ಹೊಸದಿಲ್ಲಿ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ಪೀಠವು ವಿನಯ್‌ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ನೀಡಲಾಗಿದ್ದ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಅವರು ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗಿದ್ದರು.

ಇತ್ತೀಚಿಗೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News