×
Ad

ಹಾಸನ: ಪತ್ನಿ, ಮಗುವನ್ನು ನೋಡಲು ತೆರಳಿದ್ದ ಯುವಕ ಹೃದಯಾಘಾತದಿಂದ ಸಾವು

Update: 2025-07-01 23:22 IST

ರವಿಕುಮಾರ್

ಬೇಲೂರು: ಬಾಣಂತನಕ್ಕೆಂದು ತವರಿನಲ್ಲಿದ್ದ ಪತ್ನಿ ಹಾಗೂ ಒಂಭತ್ತು ತಿಂಗಳ ಮಗುವನ್ನು ಭೇಟಿಯಾಗಲು ತೆರಳಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗುವನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಕುಸಿದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಯಕಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮಾದಿಹಳ್ಳಿ ಗ್ರಾಮದ ರವಿಕುಮಾರ್(30) ಮೃತಪಟ್ಟವರು.

ಸೋಮವಾರ ಸಂಜೆ ತನ್ನ ಮನೆಯಿಂದ ಹೊರಟು, ಪತ್ನಿಯ ಮನೆ ಬೇಲೂರು ತಾಲೂಕಿನ ಹಲ್ಮಿಡಿ ಸಮೀಪದ ಯಕಶೆಟ್ಟಿಹಳ್ಳಿಗೆ ತೆರಳಿದ್ದರು. ಅಲ್ಲಿ ಪತ್ನಿಯೊಂದಿಗೆ ಮಾತನಾಡಿ, ತಮ್ಮ ಒಂಭತ್ತು ತಿಂಗಳ ಮಗುವಿನೊಂದಿಗೆ ಸ್ವಲ್ಪ ಸಮಯ ಕಳೆದಿದ್ದಾರೆ. ಆದರೆ, ಕೆಲವೇ ಕ್ಷಣಗಳಲ್ಲಿ ರವಿಕುಮಾರ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರವಿಕುಮಾರ್ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಕೃಷಿಯ ಮೂಲಕ ಜೀವನ ಸಾಗಿಸುತ್ತಿದ್ದರು. ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ ಅವರ ಅಕಾಲಿಕ ಮರಣ ಕುಟುಂಬಸ್ಥರಿಗೆ ಆಘಾತವನ್ನುಂಟುಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News