×
Ad

ಮಡಿಕೇರಿ| ಅಶ್ಲೀಲ ಸಂದೇಶ ಪೋಸ್ಟ್ ಮಾಡಿದ ಆರೋಪ: ಯುವಕನ ಬಂಧನ

Update: 2023-12-27 20:04 IST

ಸಾಂದರ್ಭಿಕ ಚಿತ್ರ 

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕೊಡಗಿನ ಬಾಳೆಲೆ ನಿವಾಸಿ ಶಯನ್(20) ಎಂಬಾತ ಬಂಧಿತ ಯುವಕ. ಈತನ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಯನ್ ತನ್ನ ಎಕ್ಸ್ ಖಾತೆಯಲ್ಲಿ ಅಶ್ಲೀಲ ಸಂದೇಶವನ್ನು ಪೋಸ್ಟ್ ಮಾಡಿದ್ದ‌ ಎನ್ನಲಾಗಿದೆ. ಇದನ್ನು ಗಮನಿಸಿ ಪೊಲೀಸ್ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಮಾಹಿತಿ ನೀಡಿತ್ತು. ನಂತರ ಶಯನ್‍ನನ್ನು ಬಂಧಿಸಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News