×
Ad

ಕಸ ಎಸೆದಿದ್ದಕ್ಕಾಗಿ ಜಗಳ: ಒಂದೇ ಕುಟುಂಬದ ಮೂವರ ಹತ್ಯೆ

Update: 2023-06-20 11:47 IST

ಲಕ್ನೋ: ಕ್ಷುಲ್ಲಕ ವಿಷಯಕ್ಕೆ ನಡೆದ ಜಗಳದಲ್ಲಿ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣ ಉತ್ತರ ಪ್ರದೇಶದ ಮೈನ್ಪುರಿಯ ಕರ್ಹಾಲ್ ಪ್ರದೇಶದಲ್ಲಿ ಸೋಮವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಗಳನ್ನುಕಾಯಂ ಸಿಂಗ್ (85), ರಾಮೇಶ್ವರ ಸಿಂಗ್ (76) ಮತ್ತು ಮಮತಾದೇವಿ (28) ಎಂದು ಗುರುತಿಸಲಾಗಿದೆ.


ರಸ್ತೆ ಬದಿ ಕಸ ಎಸೆದ ವಿಷಯದಲ್ಲಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಇದು ವಿಕೋಪಕ್ಕೆ ತಿರುಗಿ ಮೂವರ ಹತ್ಯೆಗೆ ಕಾರಣವಾಗಿದೆ. ಘಟನೆಯಲ್ಲಿ ಸರೋಜಾದೇವಿ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಮುಖ ಆರೋಪಿ ರಾಹುಲ್ ಯಾದವ್ ಎಂಬಾತನ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಗ್ರಾಮಕ್ಕೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ ಎಂದು ಎಸ್ ಪಿ ವಿನೋದ್ ಕುಮಾರ್ ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳು ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News