×
Ad

ಧರ್ಮಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

Update: 2023-07-08 11:54 IST

ಬೆಳ್ತಂಗಡಿ: ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗು‌ಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು. 

ನಂತರ ಶ್ರೀ ಗುರುದೇವ ಮಠ ಕನ್ಯಾಡಿಗೆ ಭೇಟಿ ನೀಡಿದ ಸಚಿವರು ಚಾತುರ್ಮಾಸ್ಯ ವ್ರತದಲ್ಲಿ ಇರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ  ರಕ್ಷಿತ್ ಶಿವರಾಂ ಕೂಡಾ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News