×
Ad

ಆಂಧ್ರ : ಮದುವೆ ಸಮಾರಂಭದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಾಲುವೆಗೆ ಬಿದ್ದು 7 ಮಂದಿ ಮೃತ್ಯು

Update: 2023-07-11 10:45 IST

ಅಮರಾವತಿ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ದರ್ಸಿ ಬಳಿ ಬಸ್ ನೀರಿನ ಕಾಲುವೆಗೆ ಬಿದ್ದ ಪರಿಣಾಮ ಏಳು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. .

40 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಾಗರ ಕಾಲುವೆಗೆ ಬಿದ್ದಿದ್ದರಿಂದ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಬಸ್ಸು ಕಾಕಿನಾಡಕ್ಕೆ ಹೊರಟಿತ್ತು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ, ರಾಜ್ಯದ ಕಾಕಿನಾಡ ನಗರದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪ್ರಯಾಣಿಕರು ಸರಕಾರಿ ಬಸ್ ಅನ್ನು ಬಾಡಿಗೆಗೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News