×
Ad

ಬಂಟ್ವಾಳ: ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ

Update: 2023-07-12 13:54 IST

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ ಕೇಂದ್ರದ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಬಿ.ಸಿ.ರೋಡ್ ಮಿನಿ ವಿಧಾನಸೌಧ ಮುಂಭಾಗದಲ್ಲಿ ಮೌನ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ, ಪಕ್ಷ ಪ್ರಮುಖರಾದ ಬಿ.ಎಚ್.ಖಾದರ್, ಅಶ್ವನಿ ಕುಮಾರ್ ರೈ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ ಜೈನ್, ಪದ್ಮಶೇಖರ್ ಜೈನ್, ಕೆ.ಪದ್ಮನಾಭ ರೈ, ಲುಕ್ಮಾನ್ ಬಂಟ್ವಾಳ, ಮುಹಮ್ಮದ್ ನಂದರಬೆಟ್ಟು, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಹರ್ಷದ್ ಸರವು, ಇಬ್ರಾಹಿಂ ನವಾಝ್ ಬಡಕಬೈಲು, ಸುರೇಶ್ ಜೋರಾ, ಇಬ್ರಾಹಿಂ ಕೈಲಾರ್, ಸಿದ್ದೀಕ್ ಸರವು, ಅಲ್ಬರ್ಟ್ ಮಿನೇಜಸ್, ಶ್ರೀಧರ್ ರೈ ಕುರ್ಲೆತ್ತಿಮಾರು, ಮಲ್ಲಿಕಾ ವಿ.ಶೆಟ್ಟಿ, ಸದಾಶಿವ ಬಂಗೇರ, ಐಡಾ ಸುರೇಶ್, ಮಹಮ್ಮದ್ ಶರೀಫ್, ಜೆಸಿಂತ ಡಿ.ಸೋಜ, ಬಿ.ಮೋಹನ್, ಸಿರಾಜ್ ಮದಕ, ಲೋಲಾಕ್ಷ ಶೆಟ್ಟಿ, ಮಹಮ್ಮದ್ ನಂದವಾರ, ಜೊಸ್ಮಿನ್ ಪಿಂಟೋ, ದಿನೇಶ್ ಶೆಟ್ಟಿ, ಪ್ರಶಾಂತ್ ಕುಲಾಲ್, ವೆಂಕಪ್ಪ ಪೂಜಾರಿ, ಸ್ಟೀವನ್, ಮಧುಸೂದನ್, ಸದಾನಂದ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News