×
Ad

ಬೆಳ್ತಂಗಡಿ: ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ

Update: 2023-06-20 16:01 IST

ಬೆಳ್ತಂಗಡಿ: ಕೇಂದ್ರ ಸರಕಾರ ರಾಜ್ಯದ ಬಡವರಿಗೆ ವಿತರಿಸಲು ಅಕ್ಕಿ ನೀಡಿದೆ ಬಡವರ ಅನ್ನ ಕಸಿದುಕೊಂಡಿದೆ. ಈ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದ್ದಾರೆ.

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೇ‌ದ್ರ ಸರಕಾರದ ನೀತಿಯ ವಿರುದ್ದದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಯಾರು ಏನೇ ಮಾಡಿದೂ ರಾಜ್ಯದ ಕಾಂಗ್ರೆಸ್ ಸರ್ಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸಲಿದೆ. ಬಿಜೆಪಿಗೆ ತಾಕತ್ತಿದ್ದರೆ ಅದನ್ನು ತಡೆಯಲಿ ಎಂದು ಸವಾಲೆಸೆದರು.



‘ಅನ್ನ ಕಸಿದ ಬಿಜೆಪಿ ಸರಕಾರಕ್ಕೆ ಧಿಕ್ಕಾರ’ ಎಂಬ ಘೋಷಣೆ ಕೂಗುತ್ತಾ ತಟ್ಟೆ ಬಡಿಯುತ್ತಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಬಸ್ ನಿಲ್ದಾಣದಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧದ ವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆ.ಪಿ‌ಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮುಖಂಡರುಗಳಾದ ಶೇಖರ ಕುಕ್ಕೇಡಿ, ಧರಣೇಂದ್ರ ಕುಮಾರ್,ನಮಿತ, ಜಯವಿಕ್ರಮ, ರಾಜು ಪೂಜಾರಿ, ಸತೀಶ್ ಕಾಶಿಪಟ್ಣ, ವಂದನಾ ಭಂಡಾರಿ, ಪ್ರವೀಣ್ ಗೌಡ, ಜೆಸ್ಸಿಂತಾ ಮೋನಿಸ್, ಅಯ್ಯೂಬ್ ಡಿ.ಕೆ, ವಿನ್ಸೆಂಟ್ ಡಿ ಸೋಜ, ಇಸ್ಮಾಯಿಲ್ ಪೆರಿಂಜೆ, ಕರೀಂ ಗೇರುಕಟ್ಟೆ ಹಾಗೂ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News