×
Ad

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ ಟಿಪ್ಪರ್

Update: 2023-07-04 16:50 IST

ಚಿಕ್ಕಮಗಳೂರು: ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ರಸ್ತೆಗುರುಳಿದ ಘಟನೆ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಎಂ.ಸ್ಯಾಂಡ್ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮಗುಚಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ಕಾಫಿನಾಡಲ್ಲಿ ಮಳೆ-ಗಾಳಿ ಅಬ್ಬರ ಮುಂದುವರಿದಿದ್ದು, ಮಲೆನಾಡಿನಲ್ಲಿ ಮಳೆಯಿಂದ ವಾಹನಗಳು ನಿಯಂತ್ರಣ ತಪ್ಪುತ್ತಿರುವುದು ಸಾಮಾನ್ಯವಾಗಿದೆ ಎನ್ನಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News