×
Ad

ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ: ಕಾಂಗ್ರೆಸ್ ಲೇವಡಿ

Update: 2023-06-30 10:52 IST

ಬೆಂಗಳೂರು, ಜೂ.30: ಶಕ್ತಿ ಯೋಜನೆಯಿಂದ ರಾಜ್ಯದ ನಷ್ಟದ ಹಾದಿಯಲ್ಲಿದ್ದ ಸಾರಿಗೆ ಸಂಸ್ಥೆಗಳು ಈಗ ಲಾಭದ ದಾರಿಗೆ ಮರಳಿವೆ. ಆದರೆ ಈ ಯೋಜನೆಯಿಂದ 'ಸಾರಿಗೆ ಸಂಸ್ಥೆಗಳು ಮುಳುಗಿಯೇ ಬಿಡುತ್ತವೆ' ಬೊಬ್ಬೆ ಹೊಡೆಯುತ್ತಿದ್ದ ರಾಜ್ಯ ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ.

ಈ ಬಗ್ಗೆ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, "ನಷ್ಟದ ಹಾದಿಯಲ್ಲಿದ್ದ ಸಾರಿಗೆ ಸಂಸ್ಥೆಗಳು ಈಗ ಲಾಭದ ದಾರಿಗೆ ಮರಳಿವೆ. ಪುರುಷ ಪ್ರಯಾಣಿಕರ ಸಂಖ್ಯೆಯೂ ಗಣನಿಯವಾಗಿ ಹೆಚ್ಚಳವಾಗಿ ಸಾರಿಗೆ ಸಂಸ್ಥೆಗಳಿಗೆ ಆದಾಯ ಹರಿದುಬರುತ್ತಿದೆ. ಬಿಜೆಪಿಯ ಖಾಸಗೀಕರಣದ ಹುನ್ನಾರಕ್ಕೆ ನಷ್ಟದ ಕೂಪಕ್ಕೆ ಜಾರಿದ್ದ ಸಾರಿಗೆ ಸಂಸ್ಥೆಗಳು ಈಗ ತಲೆ ಎತ್ತಿ ಬೀಗುತ್ತಿವೆ. ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಮುಳುಗಿಯೇ ಬಿಡುತ್ತವೆ ಎಂದು ಬೊಬ್ಬೆ ಹೊಡೆಯುತ್ತಿದ್ದ ರಾಜ್ಯ ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ!" ಎಂದು ವ್ಯಂಗ್ಯವಾಡಿದೆ.


 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News