×
Ad

ಹಾಸನ: ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಕೌಟುಂಬಿಕ ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮೇಲೆ ಹಲ್ಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಹೊನ್ನಿಕೊಪ್ಪಲು ತಿರುವಿನ ಮನೆಯಲ್ಲಿ ಶನಿವಾರ ನಡೆದಿದೆ.

Update: 2023-06-25 11:49 IST

ಹಾಸನ, ಜೂ.25: ಕೌಟುಂಬಿಕ ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮೇಲೆ ಹಲ್ಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಹೊನ್ನಿಕೊಪ್ಪಲು ತಿರುವಿನ ಮನೆಯಲ್ಲಿ ಶನಿವಾರ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸುನೀತಾ ಹಲ್ಲೆಗೊಳಗಾದವರು. ಇವರ ಮೊಣಕೈ, ಹೊಟ್ಟೆ ಮತ್ತು ಬೆರಳುಗಳಿಗೆ ಮಚ್ಚಿನ ಏಟನಿಂದ ಗಾಯಗಳಾಗಿದ್ದು, ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಆರೋಪಿ ಪತಿ ಶ್ರೀನಿವಾಸ್ ತಲೆಮರೆಸಿಕೊಂಡಿದ್ದಾನೆ.

ಜಗಳ ಬಿಡಿಸಲು ಬಂದವರ ಕಾರಿನ ಮೇಲೂ ಆರೋಪಿ ದಾಳಿ ನಡೆಸಿ ಜಖಂಗೊಳಿಸಿದ್ದಾನೆ.

ಪತಿ-ಪತ್ನಿ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿದ್ದು, ಹಲವು ಬಾರಿ ರಾಜಿ ಸಂಧಾನ ನಡೆದಿತ್ತು. ಒಂದೇ ಮನೆಯಲ್ಲಿ ಬೇರೆ ಬೇರೆ ವಾಸವಿದ್ದರು ಎನ್ನಲಾಗಿದೆ.

ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News