×
Ad

ಕೇಂದ್ರಕ್ಕೆ ಕರ್ನಾಟಕ ಮಾತ್ರ ಮುಖ್ಯವಲ್ಲ: ಸಂಸದ ನಳಿನ್ ಕುಮಾರ್ ಕಟೀಲ್

Update: 2023-06-23 12:01 IST

ಕಲಬುರಗಿ: ಕೇಂದ್ರಕ್ಕೆ ಕರ್ನಾಟಕವೊಂದೇ ಮುಖ್ಯವಲ್ಲ. ಇತರ ರಾಜ್ಯಗಳಿಗೆ ಅಕ್ಕಿ ಪೂರೈಸುವ ಜವಾಬ್ದಾರಿ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ. ಉಚಿತ ಅಕ್ಕಿ ನೀಡುವ ಮುನ್ನ ಪ್ರಧಾನಿ ಅಥವಾ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿಲ್ಲ. ಹೀಗಾಗಿ ಬೇಕಾದ ಅಕ್ಕಿ ಕೊಡುವ ಯೋಜನೆಗೆ ಅಕ್ಕಿಯನ್ನು ತಾನೇ ಹೊಂದಿಸಿಕೊಳ್ಳಬೇಕು ಎಂದರು.

ಕೇಂದ್ರ ಸರಕಾರ ರಾಜ್ಯದೊಂದಿಗೆ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಬದಲಾಗಿ ಸಿದ್ದರಾಮಯ್ಯ ಅವರೇ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರಕಾರ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ, ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಾಪಸ್ ಪಡೆದಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ ಎಂದರು.

ಕೇಂದ್ರ ಆಹಾರ ಸಚಿವರು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಅವರ ಭೇಟಿಗೆ ಸಮಯ ನೀಡದಿರುವ ಬಗ್ಗೆ ಕಟೀಲ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News