×
Ad

ಮಧ್ಯಪ್ರದೇಶ : ಮದುವೆ ಮನೆಯವರಿದ್ದ ಟ್ರಕ್ ನದಿಗೆ ಬಿದ್ದು ಮೂವರು ಮಕ್ಕಳು ಸೇರಿ ಐವರು ಮೃತ್ಯು

ಇಪ್ಪತ್ನಾಲ್ಕು ಜನರು ಗಾಯಗೊಂಡಿದ್ದಾರೆ ಮತ್ತು ಅಪಘಾತದ ನಂತರ ಹಲವಾರು ಮಕ್ಕಳು ಕಾಣೆಯಾಗಿದ್ದಾರೆ

Update: 2023-06-28 11:11 IST

ಭೋಪಾಲ್: ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮದುವೆ ಮನೆಯವರನ್ನು ಹೊತ್ತೊಯುತ್ತಿದ್ದ ಟ್ರಕ್ ನದಿಗೆ ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಕಳೆದ ತಡರಾತ್ರಿ, ಟ್ರಕ್ ಬುಹಾರಾ ಗ್ರಾಮವನ್ನು ತಲುಪಿದಾಗ, ನದಿಯ ದಡದ ಬಳಿ ಉರುಳಿಬಿದ್ದಿದೆ. 65 ವರ್ಷದ ಮಹಿಳೆ, 18 ವರ್ಷದ ಯುವಕ, ಎರಡು-ಮೂರು ವರ್ಷದೊಳಗಿನ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ರಕ್ಷಣೆ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ'' ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಇಪ್ಪತ್ನಾಲ್ಕು ಜನರು ಗಾಯಗೊಂಡಿದ್ದಾರೆ ಮತ್ತು ಅಪಘಾತದ ನಂತರ ಹಲವಾರು ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಬಲಿಯಾದವರು ಗ್ವಾಲಿಯರ್ ನ ಬಿಲ್ಹೇಟಿ ಗ್ರಾಮದ ನಿವಾಸಿಗಳಾಗಿದ್ದು, ಅವರು ತಮ್ಮ ಮಗಳ ಮದುವೆಗಾಗಿ ಟಿಕಮ್ಗಢ್ ನ ಜಟಾರಾಕ್ಕೆ ತೆರಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News