×
Ad

ಮಡಿಕೇರಿ: ಲಾರಿ-ಕಾರು ಢಿಕ್ಕಿ; ಓರ್ವ ಗಂಭೀರ

Update: 2023-06-22 10:45 IST

ಮಡಿಕೇರಿ ಜೂ.22 : ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ಲಾರಿ ಮಗುಚಿಕೊಂಡ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಡಿಕೇರಿ- ಸಂಪಾಜೆ ರಸ್ತೆಯ ದೇವರಕೊಲ್ಲಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಲಾರಿ ಮಂಗಳೂರಿಗೆ ತೆರಳುತ್ತಿದ್ದರೆ, ಕಾರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿತ್ತು. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊoಡಿದೆ. ಅದೃಷ್ಟವಶಾತ್ ನಾಲ್ವರು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News