×
Ad

ಕರಡಿ ದಾಳಿಯಿಂದ ವ್ಯಕ್ತಿ ಸಾವು

Update: 2023-07-21 11:38 IST

ಮುಂಡಗೋಡ: ಕರಡಿದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉತ್ತರ ಕನ್ನಡ ತಾಲೂಕಿನ ಮರಗಡಿ ಗೌಳಿದಡ್ಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಜಿಮ್ಮು ವಾಘೂ ಥೊರತ್(60) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಕಾಡು ಪ್ರದೇಶದ ಸನಿಹದಲ್ಲಿರುವ ಗದ್ದೆಯಲ್ಲಿ ಕೂಲಿ ಕೆಲಸ ಮಾಡಿ ಕಾಡು ಪ್ರದೇಶದ ಗೌಳಿದಡ್ಡಿಯಲ್ಲಿರುವ ತನ್ನ ಮನೆಗೆ ಮರಳುತ್ತಿದ್ದಾಗ ಕರಡಿ ದಾಳಿ ನಡೆಸಿದ್ದು, ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಕಾತೂರ ಉಪವಲಯ ಅರಣ್ಯಾಧಿಕಾರಿ ನಾಗರಾಜ ಕಲಾಲ ಭೇಟಿನೀಡಿ ಪರಿಶೀಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News