×
Ad

ಮಂಗಳೂರು: ಇನ್ಶೂರೆನ್ಸ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ; ಅಪಾರ ನಷ್ಟ

Update: 2023-07-26 14:32 IST

ಮಂಗಳೂರು: ನಗರದ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಘಟನೆಯಲ್ಲಿ ಕಂಪ್ಯೂಟರ್, ಎಸಿ ಮತ್ತಿತರ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ. ಕಟ್ಟಡದ ಮೂರನೇ ಅಂತಸ್ತಿನಲ್ಲಿರುವ ಇನ್ಶೂರೆನ್ಸ್ ಕಚೇರಿಯಲ್ಲಿ ದಟ್ಟ ಹೊಗೆ ಆವರಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News