×
Ad

ವಲಸಿಗರು ನಮ್ಮ ಪಕ್ಷದ ಆಸ್ತಿ: ಮಾಜಿ ಸಚಿವ ಅಶ್ವತ್ಥ ನಾರಾಯಣ

Update: 2023-06-27 12:33 IST

ಬೆಂಗಳೂರು: ವಲಸಿಗರು ಪಕ್ಷದ ಆಸ್ತಿ ಎಂದು ಹೇಳುವ ಮೂಲಕ ಮಾಜಿ ಸಚಿವ ಅಶ್ವತ್ಥ ನಾರಾಯಣ, ವಲಸಿಗರಿಂದ ಬಿಜೆಪಿಯಲ್ಲಿ ಶಿಸ್ತು ಕಡಿಮೆಯಾಯಿತು ಎಂಬ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪೂರ್ಣ ಬಹುಮತವಿರದ ಸಂದರ್ಭದಲ್ಲಿ ಅವರು ಬಂದಿದ್ದರಿಂದ ನಮಗೆ ಬಹುಮತ ಸಿಗಲು ಸಾಧ್ಯವಾಯಿತು. ಆದ್ದರಿಂದ ಅವರನ್ನು ವಲಸಿಗರು ಎಂದು ಕರೆಯುವುದು ತಪ್ಪು. ಅವರು ನಮ್ಮ ಪಕ್ಷದ ಆಸ್ತಿ. ಅವರ ಸಹಕಾರದಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಯಿತು. ಇಂತಹ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News