×
Ad

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಹೊಡೆದು ಯುವಕನ ಹತ್ಯೆ

Update: 2023-07-21 15:55 IST

ಶಿವಮೊಗ್ಗ: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬನನ್ನು ಮನೆಯ ಮುಂದೆಯೇ ರಾತ್ರೋರಾತ್ರಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿರುವ ಬಗ್ಗೆ  ವರದಿಯಾಗಿದೆ.

ಕೊಲೆಗೀಡಾದವನನ್ನು ಮುಜಾಹಿದೀನ್ (32) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಸುಮಾರು 12.30ರ ಸಮಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ.ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮಾರಕಾಸ್ತ್ರಗಳಿಂದ ಈತನ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಜಾಹಿದೀನ್ ಗೆ ಸಾಕಷ್ಟು ಶತ್ರುಗಳಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಭದ್ರಾವತಿ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News