×
Ad

ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ FTSC II (POCSO) ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Update: 2023-06-22 10:28 IST

ಮಂಗಳೂರು, ಜೂ.22: ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ FTSC II (POCSO) ನ್ಯಾಯಾಲಯ ಆರೋಪಿ ಮಲತಂದೆಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಶ್ವತ್ಥ್ ಶಿಕ್ಷೆಗೊಳಗಾದ ಆರೋಪಿ. ಈತ ತನ್ನ ಪತ್ನಿಯ ಮೊದಲ ಪತಿಯ ಅಪ್ರಾಪ್ತ ವಯಸ್ಸಿನ ಮಗಳನ್ನು 2022ರ ಜುಲೈ 26ರಂದು ಪತ್ನಿ ಹೆರಿಗೆ ಹೋಗಿದ್ದ ವೇಳೆ ಅತ್ಯಾಚಾರಗೈದಿರುವ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರಿಯು ಯಾರಲ್ಲಾದರೂ ವಿಷಯ ಬಾಯಿ ಬಿಟ್ಟರೆ ಕೊಲ್ಲುವುದಾಗಿ ಬಾಲಕಿಯನ್ನು ಬೆದರಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಆರೋಪಿಯ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ FTSC II (POCSO) ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News