ದಿಲ್ಲಿ ವಿದ್ಯುತ್ ನಿಯಂತ್ರಣ ಆಯೋಗದ ಮುಖ್ಯಸ್ಥರ ಪ್ರಮಾಣವಚನ ಸಮಾರಂಭ ಮುಂದೂಡಿದ ಸುಪ್ರೀಂ ಕೋರ್ಟ್
Update: 2023-07-04 12:20 IST
ಫೋಟೋ : Twitter@NDTV
ಹೊಸದಿಲ್ಲಿ: ನಗರದ ವಿದ್ಯುತ್ ನಿಯಂತ್ರಕ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಸರಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ನಡುವಿನ ಸಂಘರ್ಷದ ನಡುವೆ ಸುಪ್ರೀಂ ಕೋರ್ಟ್ ಇಂದು ದಿಲ್ಲಿ ಸರಕಾರ ಹಾಗೂ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ ಹಾಗೂ ದಿಲ್ಲಿ ವಿದ್ಯುತ್ ನಿಯಂತ್ರಣ ಆಯೋಗದ ಮುಖ್ಯಸ್ಥರ ಪ್ರಮಾಣ ವಚನ ಸಮಾರಂಭವನ್ನು ಮುಂದೂಡಿದೆ.
ಜುಲೈ 11 ರಂದು ಮುಂದಿನ ವಿಚಾರಣೆ ನಡೆಯುವವರೆಗೆ ದಿಲ್ಲಿ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನ್ಯಾಯಮೂರ್ತಿ (ನಿವೃತ್ತ) ಉಮೇಶ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರು ಆಮ್ ಆದ್ಮಿ ಪಕ್ಷದ ಸರಕಾರಕ್ಕೆ ಸೂಚಿಸಬಾರದು ಎಂದು ನ್ಯಾಯಾಲಯ ಹೇಳಿದೆ.