×
Ad

ಉಡುಪಿ: ಮೀನುಗಾರರ, ನೇಕಾರರ ನಿಯೋಗದಿಂದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Update: 2023-07-14 12:52 IST

ಉಡುಪಿ, ಜು.14: ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮೀನುಗಾರರ ಹಾಗೂ ನೇಕಾರರ ನಿಯೋಗ ಇಂದು ಭೇಟಿ ಮಾಡಿತು.

ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮೀನುಗಾರರ ನಿಯೋಗ ಹಾಗೂ ನೇಕಾರರ ನಿಯೋಗ ಸಚಿವರನ್ನು ಭೇಟಿ ಮಾಡಿ ಮೀನುಗಾರಿಕೆ ಹಾಗೂ ನೇಕಾರರ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿ ಸಹಕಾರ ಕೋರಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೂರ್ಮಾ ರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಮೀನುಗಾರ ಮುಖಂಡರಾದ ದಯಾನಂದ ಸುವರ್ಣ, ಜಯ ಸಿ.ಕೋಟ್ಯಾನ್, ರಾಮಚಂದ್ರ ಕುಂದರ್, ಕಿಶೋರ್ ಡಿ.ಸುವರ್ಣ, ನೇಕಾರರ ನಿಯೋಗದ ಮುಖಂಡರಾದ ರತ್ನಾಕರ ಇಂದ್ರಾಳಿ, ಜಗದೀಶ್ ಶೆಟ್ಟಿಗಾರ್, ಮಂಜುನಾಥ ಮಣಿಪಾಲ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News