×
Ad

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ: ಸ್ವಯಂ ಪ್ರೇರಿತ ಪ್ರಕರಣ ದಾಖಲು

Update: 2023-07-26 12:41 IST

ಮಲ್ಪೆ: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಇಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ. ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಧ್ಯಾರ್ಥಿನಿಯರ  ಹಾಗೂ ಆಡಳಿತ ಮಂಡಳಿಯ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ದೂರನ್ನು ನೀಡುತ್ತಿದ್ದು, ಇದನ್ನು ಸ್ವೀಕರಿಸಿ, ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಂದು ದೂರಿನಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News