×
Ad

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ಅಧಿಕಾರ ಸ್ವೀಕಾರ

Update: 2023-07-14 14:58 IST

 ಉಡುಪಿ, ಜೂ.14: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ವಿದ್ಯಾ ಕುಮಾರಿ ಇಂದು ಅಧಿಕಾರ ಸ್ವೀಕರಿಸಿದರು.

ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನೂತನ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರನ್ನು ಸ್ವಾಗತಿಸಿ, ಅಧಿಕಾರವನ್ನು ಹಸ್ತಾಂತರಿಸಿ, ಶುಭ ಕೋರಿದರು.

 ಮಂಗಳೂರು ಸಮೀಪದ ಉಳ್ಳಾಲ ಮೂಲದ ವಿದ್ಯಾಕುಮಾರಿ, ಈ ಹಿಂದೆ ಉಡುಪಿಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಅಪರ ಜಿಲ್ಲಾಧಿಕಾರಿ ಯಾಗಿ ಕಾರ್ಯನಿರ್ವಹಿಸಿದ್ದರು. ಎಂ.ಎ ಸ್ನಾತಕೋತ್ತರ ಪದವಿಯೊಂದಿಗೆ ಡಾಕ್ಟರೇಟ್ ಪದವಿಯನ್ನು ಪಡೆದಿರುವ ವಿದ್ಯಾಕುಮಾರಿ, ತುಳು ಹಾಗೂ ಮಲಯಾಳಂ ಭಾಷೆಯನ್ನೂ ಬಲ್ಲವರಾಗಿದ್ದಾರೆ. ತುಮಕೂರು ಜಿಲ್ಲಾ ಪಂಚಾಯತ್‌ನ ಸಿಇಓ ಆಗಿದ್ದ ಅವರನ್ನು ಕಳೆದ ತಿಂಗಳಷ್ಟೇ ಯಾವುದೇ ಹುದ್ದೆ ತೋರಿಸದೇ ವರ್ಗಾಯಿಸಲಾಗಿತ್ತು. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News