×
Ad

ವಿದ್ಯುತ್ ತಂತಿ ಬೇಲಿ ತುಳಿದು ಕಾಡಾನೆ ಸಾವು

Update: 2023-07-17 13:16 IST

ಚಾಮರಾಜನಗರ:  ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಾಡಂಚಿನ ಗ್ರಾಮವೊಂದರಲ್ಲಿ ಬೆಳೆ ರಕ್ಷಣೆಗೆ ಹಾಕಲಾಗಿದ್ದ ಅಕ್ರಮ ವಿದ್ಯುತ್ ತಂತಿ ಬೇಲಿ ತುಳಿದ ಹಿನ್ನಲೆಯಲ್ಲಿ 20 ವರ್ಷದ ಗಂಡು ಕಾಡಾನೆವೊಂದು ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಓಂಕಾರ ವಲಯದ ಕುರುಬರಹುಂಡಿ ಗ್ರಾಮದ ಶಿವರಾಜ್ ರವರ ಜಮೀನಿನಲ್ಲಿ ಹಾಕಲಾಗಿದ್ದ ಅಕ್ರಮ ವಿದ್ಯುತ್ ತಂತಿ ಬೇಲಿಗೆ ಕಾಡಿನಿಂದ ಬಂದ ಗಂಡು ಕಾಡಾನೆ ತುಳಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಗೆ ಕಾರಣರಾದ ಶಿವರಾಜ್ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News