×
Ad

ಆರೋಗ್ಯದ ವೃದ್ಧಿಗೆ ಯೋಗ ಸಹಕಾರಿ: ಸಂಸದ ನಳಿನ್ ಕುಮಾರ್ ಕಟೀಲ್

Update: 2023-06-21 13:11 IST

ಮಂಗಳೂರು, ಜೂ.21: ಆರೋಗ್ಯದ ವೃದ್ಧಿಗೆ ಯೋಗ ಸಹಕಾರಿಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ ಪಿ ರಿಷ್ಯಂತ್, ಡಿಎಚ್‌ಒ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ, ಎಸಿಪಿ ಗೀತಾ ಕುಲಕರ್ಣಿ ವೇದಿಕೆಯಲ್ಲಿದ್ದರು.

ಯೋಗಮಾಹಿತಿ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಹೋಂ ಗಾರ್ಡ್ 9, ಯೋಗ ಸಂಘಟನೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಿಲ್ಲಾ ಆಯುಷ್ ಅಧಿಕಾರಿ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News