×
Ad

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಯಿಂದ ಸಂಚಾರಕ್ಕೆ ಸಮಸ್ಯೆ: ಆರೋಪ

Update: 2024-07-01 11:24 IST

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಪ್ರವಾಸಿಗರ ಮೋಜು-ಮಸ್ತಿಯ ಅಡ್ಡವಾಗಿರುವ ಬಗ್ಗೆ ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬಗ್ಗೆ ವರದಿಯಾಗಿದೆ.

ರಸ್ತೆ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್ ಮಾಡಿ ವಾಹನಗಳು ಓಡಾಡಲು ಜಾಗವಿಲ್ಲದಂತೆ ಮಾಡುತ್ತಿದ್ದಾರೆ‌ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಪ್ರವಾಸಿಗರು ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಕುಣಿದು ಕುಪ್ಪಳಿಸುತ್ತಿರುವ ವಿಡಿಯೋ ಇದೀಗ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಈ ಪ್ರದೇಶ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದು, ಪೊಲೀಸರ ಭಯ ಹೇಗೂ ಇಲ್ಲ. ಸ್ಥಳೀಯರ ಮಾತಿಗೂ ಕಿಮ್ಮತ್ತು ನೀಡದೆ ಪ್ರಪಾತದ ಸ್ಥಳದಲ್ಲೂ ಪ್ರವಾಸಿಗರು ಮೋಜು ಮಾಡುತ್ತಿದ್ದಾರೆ. ಮಲೆನಾಡ ಪ್ರಕೃತಿ ಮಡಿಲಿನಲ್ಲಿ ಇದೆಂಥಾ ಅನಾಚಾರ. ಮಳೆ ಮಂಜಿನಲ್ಲಿ ಪ್ರವಾಸಿಗರ ಮೋಜು ಮಸ್ತಿ ಹೆಚ್ಚಾಗಿದೆ ಎಂದು ಸ್ಥಳೀಯ ನಿವಾಸಿಗಳು ಮತ್ತು ಸಮಾಧಾನಪ್ರಿಯ ಪ್ರವಾಸಿಗರು ಆರೋಪಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.   

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News