×
Ad

11 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2025-06-03 07:34 IST

ಬೆಂಗಳೂರು: ಯುವ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಿ ರಂದೀಪ್, ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್ ಚೌಧರಿ, ನೋಂದಣಿ ಮಹಾ ಪರಿವೀಕ್ಷಕ ಕೆ.ಎ. ದಯಾನಂದ ಸೇರಿ ಹನ್ನೊಂದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳು:

ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಆಮ್ಹಾನ್ ಆದಿತ್ಯ ಬಿಸ್ವಾಸ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನವೀನ್‌ರಾಜ್ ಸಿಂಗ್- , ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ವಿ. ಅನ್ಸುಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿಯಾಗಿ ಸಮೀ‌ರ್ ಶುಕ್ಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ಡಿ. ರಂದೀಪ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಯೋಜನೆ, ಕಾರ್ಯಕ್ರಮ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಯಾಗಿ ರಮಣದೀಪ್ ಚೌಧರಿ, ನೋಂದಣಿ ಮಹಾ ಪರಿವೀಕ್ಷಕ ಮತ್ತು ಮುದ್ರಾಂಕ ಆಯುಕ್ತರಾಗಿ ಪೊಮ್ಮಲ ಸುನಿಲ್‌ ಕುಮಾರ್, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಆರ್. ರಾಮಚಂದ್ರನ್, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಆಯುಕ್ತರಾಗಿ ಕೆ.ಎ. ದಯಾನಂದ, ಕೆಎಸ್‌ಆರ್‌ಟಿಸಿ (ಐಟಿ) ನಿರ್ದೇಶಕರಾಗಿ ಇಬ್ರಾಹಿಂ ಮೈಗೂ‌ರ್, ರೇರಾ

ಕಾರ್ಯದರ್ಶಿಯಾಗಿ ಮನೋಜ್‌ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News