ಬಿಡದಿ ಟೌನ್ ಶಿಪ್ | ಸತ್ಯ ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

Update: 2026-08-09 15:04 IST

ಬೆಂಗಳೂರು, ಆ.9: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಭಾರತ ಜೋಡೋ ಭವನದಲ್ಲಿಂದು ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ, ಪಾದಯಾತ್ರೆ ಮಾಡುವ ಹಕ್ಕಿದೆ. ಅವರು ಏನು ಬೇಕಾದರೂ ಮಾಡಲಿ. ಅಧಿವೇಶನದಲ್ಲಿ ಬಂದು ಮಾತನಾಡಲಿ. ಎಲ್ಲೆಲ್ಲಿ ದೂರು ನೀಡುತ್ತಾರೋ ನೀಡಲಿ, ನಾವು ಯಾರಿಗೂ ಬಲವಂತ ಮಾಡುತ್ತಿಲ್ಲ. ಯಾವ ಸಂದರ್ಭದಲ್ಲಿ ಯಾವ ಉತ್ತರ ಕೊಡಬೇಕೋ ಕೊಡುತ್ತೇವೆ” ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News