×
Ad

ಪಾವಗಡ | ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

Update: 2025-09-20 23:53 IST

ಪಾವಗಡ, ಸೆ.20 : ತನ್ನ ಇಬ್ಬರು ಮಕ್ಕಳ ಕತ್ತು ಕುಯ್ದು ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ.

ಒಂದೂವರೆ ವರ್ಷದ ಹೆಣ್ಣುಮಗು ಹಾಗೂ ನಾಲ್ಕು ವರ್ಷದ ಗಂಡು ಮಗುವಿನ ಕತ್ತು ಕೊಯ್ದು ಸಾಯಿಸಿದ ನಂತರ ತಾಯಿ ಸರಿತಾ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆೆ.

ಗಂಡ ಸಂತೋಷ್ ಲಗೇಜ್ ಆಟೊ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಹಾಗೂ ಪಾವಗಡ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News