×
Ad

ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕಾರಿಗೆ ಆಟೋ ಢಿಕ್ಕಿ; ಓರ್ವ ಮೃತ್ಯು

Update: 2024-03-14 12:03 IST

ಕುಣಿಗಲ್ : ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಆಟೋ  ಢಿಕ್ಕಿಯಾಗಿ ಆಟೋ ಚಾಲಕ ಸಾವನ್ನಪ್ಪಿರುವ  ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿಯ ಕುರುಡಿಹಳ್ಳಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಕೋಡಹಳ್ಳಿಪಾಳ್ಯ ಗ್ರಾಮದ ನಿವಾಸಿ ಆಟೋ ಚಾಲಕ  ಜಗದೀಶ್ (44) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಕುಣಿಗಲ್ ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸಂತೋಷ್ ಹಾಗೂ ಪತ್ನಿ ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತಮ್ಮ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News