×
Ad

ತುಮಕೂರು ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ : ಸಿಎಂ ಸಿದ್ದರಾಮಯ್ಯ ಭರವಸೆ

"ಕರ್ನಾಟಕ ಕ್ರೀಡಾಕೂಟ 2025-26" ಉದ್ಘಾಟನೆ

Update: 2026-01-16 19:12 IST

ತುಮಕೂರು : ತುಮಕೂರು ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳಿಗೆ ಶುಭಕೋರಿದರು.

ಅವರು ಇಂದು ತುಮಕೂರಿನಲ್ಲಿ ಆಯೋಜಿಸಲಾಗಿದ್ದ "ಕರ್ನಾಟಕ ಕ್ರೀಡಾಕೂಟ 2025-26" ಅನ್ನು ಉದ್ಘಾಟಿಸಿ ಮಾತನಾಡಿದರು.

ಸೋಲು-ಗೆಲುವುಗಿಂತ ಕ್ರೀಡಾಸ್ಪೂರ್ತಿ ಮುಖ್ಯ :

ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಕ್ರೀಡಾಸ್ಪೂರ್ತಿ ಮುಖ್ಯ. ಪ್ರತಿ ಕ್ರೀಡಾಪಟುವು ಇದನ್ನು ಪಾಲಿಸಬೇಕು. ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದ್ದು, ಕಠಿಣ ಶ್ರಮ ಅತ್ಯಗತ್ಯ. ಪರಿಶ್ರಮದಿಂದ ಗುರಿ ಸಾಧಿಸಲು ಉತ್ತಮ ತರಬೇತಿ ಅಗತ್ಯ ಎಂದರು.

ಕ್ರೀಡಾಪಟುಗಳ ಪ್ರೋತ್ಸಾಹಕ್ಕೆ ಸರಕಾರ ಬದ್ಧ :

ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರಕಾರಿ ಉದ್ಯೋಗದಲ್ಲಿ ಮೀಸಲಾತಿಯ ನಿಯಮವನ್ನು ಜಾರಿಗೊಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಪೇದೆ ಹುದ್ದೆಯಿಂದ ಆರಕ್ಷಕ ಉಪಾಧೀಕ್ಷಕರ ಹುದ್ದೆಯ ವರೆಗೆ ಶೇ.3 ರಷ್ಟು ಮೀಸಲಾತಿಯನ್ನು ಸರಕಾರ ನೀಡುತ್ತಿದೆ. ಒಲಂಪಿಕ್ಸ್ , ಪ್ಯಾರಾ ಒಲಂಪಿಕ್ಸ್ , ಏಷಿಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್, ರಾಷ್ಟ್ರೀಯ, ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದ/ಭಾಗವಹಿಸುವ ಕ್ರೀಡಾಪಟುಗಳಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಶೇ.2 ರ ಮೀಸಲಾತಿಯನ್ನು ನೀಡಲಾಗುತ್ತಿದೆ. ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ತುಮಕೂರು ಜಿಲ್ಲೆಗೆ ಹಾಕಿ ಕ್ರೀಡಾಂಗಣ, ವಿಶ್ವದರ್ಜೆಯ ಈಜುಕೊಳದ ಬೇಡಿಕೆಯಿದ್ದು, ಕ್ರೀಡೆಗಾಗಿ ಹೆಚ್ಚಿನ ಅನುದಾನ ನೀಡುವ ಭರವಸೆಯನ್ನು ನೀಡಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News