×
Ad

ಕುಣಿಗಲ್ | ಅಪರಿಚಿತ ವಾಹನ ಢಿಕ್ಕಿ; ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೃತ್ಯು

Update: 2025-06-13 14:42 IST

ನಿಂಗರಾಜು (46) 

ತುಮಕೂರು: ಕುಣಿಗಲ್ ಪಟ್ಟಣದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉರ್ಕೆಹಳ್ಳಿ ಸಮೀಪದ ಬೈಪಾಸ್ ರಸ್ತೆಯಲ್ಲಿ ನಿಂತಿದ್ದ ವಾಹನವನ್ನು ತೆರವು ಮಾಡಿ, ವಾಪಸ್ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿಯಾಗಿ ಪೊಲೀಸ್‌ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತರನ್ನು ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯ 112 ವಾಹನದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಂಗರಾಜು (46)  ಎಂದು ಗುರುತಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರವಾನಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸೆರಿದಂತೆ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News