×
Ad

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಸಹಕಾರ ಸಚಿವ ಕೆ. ಎನ್‌ ರಾಜಣ್ಣ

Update: 2024-09-14 12:07 IST

ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನ ಮುಂದುವರಿಸುತ್ತೇನೆ. ನನ್ನ ಅಧಿಕಾರ ಮುಗಿಯುವುದರ ಒಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕ್ಷೇತ್ರದ ಇತರ ಅಭಿವೃದ್ಧಿ ಕೆಲಸಗಳನ್ನು ಮಾಡಿಸುತ್ತೇನೆ. ಮುಂದಿನ ಚುನಾವಣೆ ದೃಷ್ಟಿಯನ್ನು ಇಟ್ಟುಕೊಂಡು ಈ ಕೆಲಸ ಮಾಡಿಸುತ್ತಿಲ್ಲ. ಆದರೆ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News